Home Crime ಉದ್ಯಮಿಯೋರ್ವರ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರ ಬಂಧನ…!!

ಉದ್ಯಮಿಯೋರ್ವರ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರ ಬಂಧನ…!!

ಮಂಗಳೂರು: ಜೂ.29ರಂದು ನಸುಕಿನ ವೇಳೆ ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವರ್ಣೋದ್ಯಮಿಯೋರ್ವರ ಚಿನ್ನಾಭರಣಗಳನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಪ್ರಕರಣದಲ್ಲಿ ಭಾಗಿಯಾಗಿದ್ದ ಒಟ್ಟು 16 ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿಮಿಲ್ ಆರ್.ಕೆ (37), ಮಡಿಕೇರಿಯ ಇರ್ಷಾದ್ (40) ಹಾಗು ಮಡಿಕೇರಿಯ ಮುಸ್ತಾಫ (49) ಬಂಧಿತರು ಎಂದು ಗುರುತಿಸಲಾಗಿದೆ.

ಉದ್ಯಮಿ ವಿಕಾಸ್ ಸುಬ್ಬರಾವ್ ಧನವಡೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ತಮ್ಮ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಮಂಗಳೂರಿನ ಬೈಕಂಪಾಡಿ ಸಮೀಪ ದರೋಡೆ ಮಾಡಲಾಗಿತ್ತು. ಸದ್ಯ ಮೂವರನ್ನು ಬಂಧಿಸಿದ್ದು ಉಳಿದವರಿಗಾಗಿ ಶೋಧ ಮುಂದುವರಿದಿದೆ ಎನ್ನಲಾಗಿದೆ.