Home Karavali Karnataka ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ…!!

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ…!!

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 -28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನ.19ರಂದು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.

ಸಂಘದ ಚುನಾವಣಾಧಿಕಾರಿಯೂ ಆಗಿರುವ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಉಪಾಧ್ಯಕ್ಷರುಗಳಾದ ಉದಯ ಕುಮಾರ್ ಮುಂಡ್ಕೂರು, ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳಾದ ಉಮೇಶ್ ಮಾರ್ಪಳ್ಳಿ, ಸುರೇಶ್ ಎರ್ಮಾಳ್, ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ವಿಜಯ ಆಚಾರ್ಯ ಉಚ್ಚಿಲ, ಪ್ರಮೋದ್ ಸುವರ್ಣ, ಪ್ರವೀಣ್ ಮುದ್ದೂರು, ಮೋಹನ್ ಉಡುಪ, ಮುಹಮ್ಮದ್ ಶರೀಫ್ ಕಾರ್ಕಳ, ರಮಾನಂದ ಅಜೆಕಾರು, ಚಂದ್ರಶೇಖರ್, ಯೋಗೀಶ್ ಕುಂಭಾಶಿ, ರಾಘವೇಂದ್ರ ಪೈ ಉಪಸ್ಥಿತರಿದ್ದರು.