ಪುತ್ತೂರು : ಜಿಮ್ ಟ್ರೈನರ್ ಒಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಜುಲೈ 5ರಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ.
ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ, ಪ್ರಸ್ತುತ ಪುತ್ತೂರಿನ ಕಲ್ಲಿಮಾರ್‌ನಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಜುಲೈ 5ರಂದು ಬೆಳಿಗ್ಗೆ ಸಚಿನ್ ಅವರು ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರು ಅವರು ಆಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.
ಸಚಿನ್ ರೈ ಅವರ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿರುವ ಅವರ ತಾಯಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತ ಸಚಿನ್ ರೈ ಅವರು ತಾಯಿ ಗುಲಾಬಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.




