ಮಲ್ಪೆ: ಮೀನುಗಾರರೊಬ್ಬರು ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದರು. ನ.21 ರಂದು 10:50 ಗಂಟೆಗೆ ಮಲ್ಪೆ ದಕ್ಕೆಯಲ್ಲಿ ಜಯಮಂಗಳ ಬೋಟ್‌ನಲ್ಲಿ ಮೀನು ಖಾಲಿ ಮಾಡುವಾಗ ಆಯತಪ್ಪಿ ನೀರಿಗೆ ಬಿದ್ದಿದ್ದು, ಅಲ್ಲಿದ್ದವರು ಕೂಡಲೇ ಆತತನ್ನು ಮೇಲಕ್ಕೆ ಎತ್ತಿ ಉಪಚರಿಸಿ ಅಂಬ್ಯುಲೆನ್ಸ್‌ನಲ್ಲಿ ಉಡುಪಿ ಆದರ್ಶ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದಾರೆ. ಅಲ್ಲಿ 11:15 ಗಂಟೆಗೆ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಮೃತಪಟ್ಟವರು ರವಿ ಟಿ ಸಾಲ್ಯಾನ್ ರವರು (51) ಎಂದು ತಿಳಿಯಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 88/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



