Home Crime ಐಷಾರಾಮಿ ಕಾರಿಗೆ ಅಕ್ರಮವಾಗಿ ನೊಂದಣಿ : ಸರಕಾರಕ್ಕೆ ಕೋಟಿ ರೂ.ವಂಚನೆ : ಎಫ್ ಐ ಆರ್...

ಐಷಾರಾಮಿ ಕಾರಿಗೆ ಅಕ್ರಮವಾಗಿ ನೊಂದಣಿ : ಸರಕಾರಕ್ಕೆ ಕೋಟಿ ರೂ.ವಂಚನೆ : ಎಫ್ ಐ ಆರ್ ದಾಖಲು…!!

ಉಡುಪಿ : ವಿದೇಶದಿಂದ ಆಮದು ಮಾಡಿಕೊಂಡ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರನ್ನು ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಅಂದಾಜು ಕೋಟಿ ರೂ. ರಸ್ತೆ ತೆರಿಗೆ ಸರಕಾರಕ್ಕೆ ನಷ್ಟ ಮಾಡಿರುವ ಬಗ್ಗೆ ದಿನಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾದ ಹಿನ್ನೆಲೆ, ಸದ್ರಿ ವರದಿಯ ಆಧಾರದ ಮೇಲೆ ಉಡುಪಿ ಲೋಕಾಯುಕ್ತ ಪೊಲೀಸರು ಮಾಹಿತಿಗಳನ್ನು ಕಲೆ ಹಾಕಿ ಸಂಬಂಧಪಟ್ಟ ದಾಖಲಾತಿಗಳನ್ನು ಪಡೆದು ಉಡುಪಿ ಆರ್.ಟಿ.ಓ ಕಚೇರಿಯಲ್ಲಿ ಸುಮಾರು 2 ಕೋಟಿ ರೂ. ಬೆಲೆ ಬಾಳುವ ಮರ್ಸಿಡಿಸ್ ಬೆಂಜ್ ಕಾರನ್ನು ಅದೇ ಕಂಪನಿಯ ಕಡಿಮೆ ಬೆಲೆಯ ಕಾರಿನ ಮಾಡೆಲ್ ಅನ್ನು ಎಡಿಟ್ ಮಾಡಿ 2017ನೇ ಮಾಡೆಲ್‌ನ ಸದ್ರಿ ಕಾರನ್ನು ಫೆಬ್ರವರಿ 2025 ರಂದು ನೋಂದಣಿ ಮಾಡುವ ಮೂಲಕ ಅಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಯವರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.

ಸರಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಹಣ ನಷ್ಟವನ್ನುಂಟು ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದ ಹಿನ್ನೆಲೆ, ಆರ್.ಟಿ.ಓ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿ ಅನುಮತಿ ಪಡೆದುಕೊಂಡು ಪ್ರಾಥಮಿಕ ವಿಚಾರಣೆ ನಡೆಸಿ, ಪ್ರಾಥಮಿಕ ವಿಚಾರಣೆಯಲ್ಲಿ ಉಡುಪಿ ಹಾಗೂ ಮಂಗಳೂರು ಆರ್.ಟಿ.ಓ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿಯವರ ಮೇಲಿನ ಆರೋಪಗಳು ದೃಢಪಟ್ಟಿರುವುದರಿಂದ ಮೇಲಾಧಿಕಾರಿಗಳ ಅನುಮತಿ ಪಡೆದು ನವೆಂಬರ್ 17 ರಂದು ಪ್ರಕರಣ ದಾಖಲಿಸಿ, ಅಧಿಕಾರ ದುರ್ಬಳಕೆ ಹಾಗೂ ದಾಖಲಾತಿಗಳ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಉಡುಪಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುವುದಾಗಿ ಉಡುಪಿ ಲೋಕಾಯುಕ್ತ ಪೊಲೀಸ್ ಕಛೇರಿ ಪ್ರಕಟಣೆ ತಿಳಿಸಿದೆ.