Home Crime ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು…!!

ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು…!!

ಬೆಂಗಳೂರು : ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನ ತಡೆದು ನಗರದಲ್ಲಿ7.11 ಕೋಟಿ ಹಣ ರಾಬರಿ ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ಸಾಲ ತೀರಿಸುವ ಸಲುವಾಗಿ ಆರೋಪಿಗಳು ದರೋಡೆ ಮಾಡಿದ್ದು, ಮಾಸ್ಟರ್ ಮೈಂಡ್ ಕ್ಸೇವಿಯರ್ ಸೇರಿ ಬಹುತೇಕರು ಸಾಲಗಾರರು ಎಂಬುದು ಗೊತ್ತಾಗಿದೆ.

ಆರೋಪಿಗಳು ಇಸ್ಪೀಟು, ಜೂಜು ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದು, ಅದನ್ನು ಹೇಗಾದರೂ ತೀರಸಿಬೇಕೆಂದು ಎಟಿಎಂ ವಾಹನ ದರೋಡೆಗೆ ಸ್ಕೇಚ್ ಹಾಕಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಹಾಲಿ ಸಿಬ್ಬಂದಿಯೇ ದರೋಡೆಯ ಮಾಸ್ಟರ್ ಮೈಂಡ್​​
ಮುಖ್ಯ ಆರೋಪಿಗಳಾದ ಗೋಪಿ ಮತ್ತು ಕ್ಸೇವಿಯರ್ 17 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆ ಪೈಕಿ ಕ್ಸೇವಿಯರ್ ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಕುಡಿತ, ಜೂಜಿನ ಚಟದಿಂದಾಗಿ ಆರೋಪಿಗಳು ಹಣಕಾಸು ಸಮಸ್ಯೆಗೆ ಸಿಲುಕಿದ್ದರು. ದರೋಡೆ ಹಣದಲ್ಲಿ ಸಾಲ ತೀರಿಸಿ, ಉಳಿದ ಹಣದಲ್ಲಿ ಐಷಾರಾಮಿ ಜೀವನ ನಡೆಸುವ ಪ್ಲ್ಯಾನ್​​ ಆರೋಪಿಗಳದ್ದಾಗಿತ್ತು. ಈ ಹಿನ್ನಲೆ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಪ್ಲ್ಯಾನ್ ಪ್ರಕಾರ ATM ವಾಹನ ದರೋಡೆ ಮಾಡಲಾಗಿದ್ದು, ಹಾಲಿ ಸಿಬ್ಬಂದಿ ಗೋಪಿಯೇ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್​ ಎಂಬುದು ಬಹಿರಂಗವಾಗಿದೆ. ಪ್ರಕರಣ ಸಂಬಂಧ ಸದ್ಯ ಮೂವರನ್ನು ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮತ್ತೆ ಮೂವರನ್ನು ಹೈದರಾಬಾದ್​ನಿಂದ ಕರೆತರಲಾಗಿದೆ.

ಪ್ರಕರಣದ 7ನೇ ಆರೋಪಿ ರಾಕೇಶ್ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಆರೋಪಿ ರವಿ ಸಹೋದರನಾದ ರಾಕೇಶ್, ರವಿ ಜೊತೆ ಸೇರಿ ದರೋಡೆಗೆ ಸಂಚು ರೂಪಿಸಿದ್ದ. ರಾಕೇಶನೇ ತಡರಾತ್ರಿ ಸಿದ್ದಾಪುರ ಠಾಣೆಗೆ ಬಂದು ಶರಣಾಗಿದ್ದಾನೆ.