Home Crime ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಮದುವೆಗೆ ಕೆಲವೇ ದಿನಗಳಿರುವಾಗ ಘಟನೆ..!!

ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಮದುವೆಗೆ ಕೆಲವೇ ದಿನಗಳಿರುವಾಗ ಘಟನೆ..!!

ಸುಳ್ಯ : 30 ವರ್ಷ ವಯಸ್ಸಿನ ಜನಾರ್ಧನ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಮೇ.8) ನಡೆದಿದೆ.

ಜನಾರ್ಧನ್ ಸುಳ್ಯದ ಸೇವಾಜೆಯ ನಿವಾಸಿ ಎಂದು ಗುರುತಿಸಲಾಗಿದೆ.ಅವರಿಗೆ ಮದುವೆ ನಿಶ್ಚಿತವಾಗಿತ್ತು, ಮದುವೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇದ್ದವು ಎನ್ನಲಾಗಿದೆ.

ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.