ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿಗೆ ಭೇಟಿ ನೀಡಲಿದ್ದು, ಭರದ ಸಿದ್ಧತೆಗಳು ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಬಂದಿಳಿಯುವ ಉಡುಪಿಯ ಆದಿ ಉಡುಪಿ ಹೆಲಿ ಪ್ಯಾಡ್ ಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಅಲ್ಲಿಂದ ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೃಷ್ಣ ಮಠದ ರಾಜಾಂಗಣಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಜಿಲ್ಲಾಧಿಕಾರಿಗಳು ಸಂಘಟಕರ ಜೊತೆ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯ್ಕ್, ಡಿವೈಎಸ್ಪಿ ಪ್ರಭು ಡಿ.ಟಿ, ಉಡುಪಿ ನಗರ ಠಾಣಾ ನಿರೀಕ್ಷಕ ಮಂಜುನಾಥ್ ಬಡಿಗೇರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.






