ಮುಂಬೈ: ಬಾಲಿವುಡ್ ಹೀ ಮ್ಯಾನ್ ಖ್ಯಾತಿಯ ಹಿರಿಯ ನಟ ಧರ್ಮೇಂದ್ರ ಮೃತಪಟ್ಟಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 89 ವರ್ಷದ ಧರ್ಮೇಂದ್ರ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈಯ ಬ್ರೀಜ್ ಕ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ಅವರನ್ನು ಡಿಸ್‌ಚಾರ್ಚ್ ಮಾಡಲಾಗಿತ್ತು. ಇದೀಗ ಅವರು ಮೃಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
1960ರಿಂದಲೂ ಧರ್ಮೇಂದ್ರ ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ. ಸುಮಾರು 6 ದಶಕಗಳ ವೃತ್ತಿ ಜೀವನದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಹಿಂದಿ ಚಿತ್ರರಂಗದ ‘ಹೀ-ಮ್ಯಾನ್’ ಎಂದೇ ಅವರನ್ನು ಅಭಿಮಾನಿಗಳು ಗುರುತಿಸುತ್ತಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ಧರ್ಮೇಂದ್ರ ನಟಿಸಿ ಅನೇಕ ಬಗೆಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
1960ರಲ್ಲಿ ರಿಲೀಸ್ ಆದ ʼದಿಲ್ ಬಿ ತೇರ ಹಮ್ ಬಿ ತೇರೆʼ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟ ಧರ್ಮೇಂದ್ರ ಬಳಿಕ ಹಿಂದಿರುಗಿ ನೋಡಲೇ ಇಲ್ಲ. ಬರೋಬ್ಬರಿ 6 ದಶಕಗಳಿಂದ ಹೆಚ್ಚು ಕಾಲ ಅಭಿನಯಿಸುತ್ತಲೇ ಬಂದಿದ್ದಾರೆ. ಹಿಂದಿ ಜತೆಗೆ ಪಂಜಾಬಿ, ಬಂಗಾಳಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.






