Home Crime ಉಡುಪಿ: ವ್ಯಕ್ತಿ ಆತ್ಮಹತ್ಯೆಗೆ ಶರಣು…!!

ಉಡುಪಿ: ವ್ಯಕ್ತಿ ಆತ್ಮಹತ್ಯೆಗೆ ಶರಣು…!!

ಶಂಕರನಾರಾಯಣ: ಕೆಲಸಕ್ಕೆ ಹೋಗದೆ ಮಾನಕಸಿವಾಗಿ ಖಿನ್ನತೆ ಒಳಗಾಗಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದವರು ಕಮಲಶಿಲೆ ಗ್ರಾಮದ ಬರೆಗುಂಡಿ ನಿವಾಸಿ ನಾಗೇಂದ್ರ ಎಂದು ತಿಳಿದು ಬಂದಿದೆ.

ಇವರು ನ.22ರಂದು ಬೆಳಗ್ಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.