Home Crime ಧರ್ಮಸ್ಥಳ ಬುರುಡೆ ಪ್ರಕರಣ : ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು ಮಂಜೂರು…!!

ಧರ್ಮಸ್ಥಳ ಬುರುಡೆ ಪ್ರಕರಣ : ಸಾಕ್ಷಿ ದೂರುದಾರ ಚಿನ್ನಯ್ಯಗೆ ಜಾಮೀನು ಮಂಜೂರು…!!

ಮಂಗಳೂರು : ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಸಾಕ್ಷಿ‌ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಪಾಲಾಗಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.

ಶಿವಮೊಗ್ಗ ಜೈಲಿನಲ್ಲಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಸಾಕ್ಷಿ, ದೂರುದಾರ 45 ವರ್ಷದ ಚಿನ್ನಯ್ಯನಿಗೆ ಸೋಮವಾರ ಮಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನಿ ಕೋರಿ ಅರ್ಜಿ ಸಲ್ಲಿಸಿದ್ದರು.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಶ್ಯೂರಿಟಿಗಳೊಂದಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಆರೋಪಿ ಇದೇ ರೀತಿಯ ಅಪರಾಧವನ್ನು ಮತ್ತೆ ಮಾಡಬಾರದು ಮತ್ತು ಪರಾರಿಯಾಗಬಾರದು, ಬೆದರಿಕೆ, ಪ್ರಚೋದನೆಗಳ ಮೂಲಕ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ನಾಶಪಡಿಸಬಾರದು ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಅಲ್ಲದೆ, ಆರೋಪಿ ತನಿಖಾ ಅಧಿಕಾರಿಗೆ ಲಭ್ಯವಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ.