ಕಾರವಾರ : ಪ್ರೌಢ ಶಾಲೆಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ದೈಹಿಕ ಶಿಕ್ಷಕನನ್ನು ಉತ್ತರ ಕನ್ನಡ ಪೊಲೀಸರು ಬಂಧಿಸಿದ್ದಾರೆ.
ಮುಂಡಗೋಡದ ಪ್ರತಿಷ್ಠಿತ ಖಾಸಗಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಕಿರಣ ಟೋಪೋಜಿ ಬಂಧಿತ ಆರೋಪಿ.
ಘಟನೆಗೆ ಸಂಬಂಧಿಸಿ ಅಪ್ರಾಪ್ತೆಯ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ಕಿರಣ ಟೋಪೋಜಿಯನ್ನು ಬಂಧಿಸಿ ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಕಿರಣ ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ.
ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥೆ ದೂರಿನಲ್ಲಿ ತಿಳಿಸಿದ್ದಾಳೆ.



