Home Karnataka News ಕಾನೂನು ಸಲಹೆಗಾರರ ಹುದ್ದೆ ಅರ್ಜಿ ಆಹ್ವಾನ

ಕಾನೂನು ಸಲಹೆಗಾರರ ಹುದ್ದೆ ಅರ್ಜಿ ಆಹ್ವಾನ

ಬೆಂಗಳೂರು : ಕಂದಾಯ ಇಲಾಖೆಯ ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ತಾತ್ಕಾಲಿಕ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ತಮ್ಮ ಸ್ವವಿವರದೊಂದಿಗೆ ನೇರವಾರಿ ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನ.

 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಕಂದಾಯ ಭವನ ಆವರಣ, ಕೆ.ಜಿ.ರಸ್ತೆ, ಬೆಂಗಳೂರು -09 ಅಥವಾ ದೂರವಾಣಿ 080-22211106 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.