Home Crime ಜೀವನದಲ್ಲಿ ಜಿಗುಪ್ಸೆ : ವ್ಯಕ್ತಿ ಆತ್ಮಹತ್ಯೆ…!!

ಜೀವನದಲ್ಲಿ ಜಿಗುಪ್ಸೆ : ವ್ಯಕ್ತಿ ಆತ್ಮಹತ್ಯೆ…!!

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕೆರ್ವಾಸೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕೆರ್ವಾಸೆ ಗ್ರಾಮದ ರಾಜೇಶ (33) ಎಂದು ಗುರುತಿಸಲಾಗಿದೆ. ಇವರು ವಿಪರೀತ ಮಧ್ಯಪಾನ ಮಾಡುವ ಚಟ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜುಲೈ 8ರಂದು ಬೆಳಿಗ್ಗೆ 11:30ರಿಂದ ಸಂಜೆ 4:00 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ತಂಗಿ ಮಲ್ಲಿಕಾ ಅವರ ಮನೆಯ ಅಡುಗೆ ಕೋಣೆಯ ಜಂತಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮೃತರ ತಂದೆ ರಾಘವ ಆಚಾರ್ಯ (55) ಅವರ ದೂರಿನ ಮೇರೆಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 14/2026ರಡಿ ಕಲಂ 194 BNSS ಅನ್ವಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.