Home Crime ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ…!!

ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ…!!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ವಾರಸುದಾರರಿದ್ದಲ್ಲಿ ಬಂಟ್ವಾಳ ನಗರ ಠಾಣೆಯನ್ನು ಸಂಪರ್ಕಿಸುವoತೆ ಠಾಣಾಧಿಕಾರಿ ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.