ಮಂಗಳೂರು : ನ್ಯಾಯವಾದಿ ನೌಶಾದ್ ಖಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ.ದಿನೇಶ್ ಶೆಟ್ಟಿ ಯಾನೆ ದಿನ್ನು ಎಂದು ತಿಳಿದು ಬಂದಿದೆ.
ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೀಶ್ ನಿಂದ ಸುಪಾರಿ ಪಡೆದು ನ್ಯಾಯವಾದಿ ನೌಶಾದ್ ಖಾಶಿಂಜಿ ಅವರನ್ನು 2009ರಲ್ಲಿ ಕೊಲೆಗೈದ ಆರೋಪದಲ್ಲಿ ದಿನೇಶ್ ಶೆಟ್ಟಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಆ ಪ್ರಕರಣದಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದ ಈತ ರಾಜ್ಯ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ 2019ರಲ್ಲಿ ಬಿಡುಗಡೆಗೊಂಡಿದ್ದ ಎಂದು ತಿಳಿದು ಬಂದಿದೆ.
ಬಳಿಕ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಹರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.
ಕಳೆದ ಒಂದೂವರೆ ವರ್ಷದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಿನೇಶ್‌ನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.



