Home Latest ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ…!!

ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ…!!

ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ನಡೆದ ಶಾಲಾ ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಯಶ್ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು.

ವೈದ್ಯರು ಹಾಗೂ ಪೋಷಕರೊಂದಿಗೆ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಚಿಕಿತ್ಸೆ ಮತ್ತು ನೆರವು ದೊರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಘಟನೆಯ ಕುರಿತು ಮಾಹಿತಿ ಪಡೆದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.