Home Crime ಮಣಿಪಾಲದ ಡೆಲ್ಲಿ ಡಾಬಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ…!!

ಮಣಿಪಾಲದ ಡೆಲ್ಲಿ ಡಾಬಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ…!!

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದ ಡೆಲ್ಲಿ ಡಾಬಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ.

ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ. ಸದ್ಯ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.