Home Crime ಮಂಗಳೂರು: 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ…!!

ಮಂಗಳೂರು: 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ…!!

ಮಂಗಳೂರು: ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿರುವ ಎಲ್ಲ 8ಮಂದಿಯ ದಾಖಲೆ ಪತ್ರಗಳು ಸಹಿತ ಪೂರ್ವಾಪರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇವರೆಲ್ಲರೂ ಬಾಂಗ್ಲಾದೇಶದ ಏಜೆಂಟ್ ಮುಸ್ತಕೀಮ್ ಎಂಬಾತನೊಂದಿಗೆ ಮಂಗಳೂರಿಗೆ ಆಗಮಿಸಿದ್ದರು ಎಂದು ತಿಳಿದು ಬಂದಿದ್ದು, ಸುರತ್ಕಲ್ ಕಾಟಿಪಳ್ಳ ಮೂಲದ ಗುತ್ತಿಗೆದಾರ ನಿಸಾರ್ ಎಂಬಾತನೊಂದಿಗೆ ಕೆಲಸ‌ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮಂಗಳೂರು ಮೂಲದ ಇಂಡಿಯನ್ ಇನ್ಫ್ರಾಟ್ರೇಕ್ಚರ್ ಎಂಬ ಕಂಪೆನಿಯು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವಠಾರದಲ್ಲಿ ನಿರ್ಮಿಸುತ್ತಿರುವ ಕಟ್ಟಡದಿಂದ ಕೆಲಸ ಮಾಡುತ್ತಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.