Home Crime ಉಪ್ಪಿನಂಗಡಿ : ಅಕ್ರಮ ಕೆಂಪುಕಲ್ಲು ಸಾಗಾಟ ಪತ್ತೆ : ಲಾರಿ ಬಿಟ್ಟು ಚಾಲಕ ಎಸ್ಕೇಪ್..!!

ಉಪ್ಪಿನಂಗಡಿ : ಅಕ್ರಮ ಕೆಂಪುಕಲ್ಲು ಸಾಗಾಟ ಪತ್ತೆ : ಲಾರಿ ಬಿಟ್ಟು ಚಾಲಕ ಎಸ್ಕೇಪ್..!!

ಉಪ್ಪಿನಂಗಡಿ : ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿದ್ದು, ಚಾಲಕ ಲಾರಿಯ ಕೀ ಹಾಗೂ ದಾಖಲೆಗಳೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

34ನೇ ನೆಕ್ಕಿಲಾಡಿ ಗ್ರಾಮದ ಬೋಳಾರ್ ಪ್ರದೇಶದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಲು ಸೂಚಿಸಿದ್ದಾರೆ.

ಈ ವೇಳೆ ಚಾಲಕ ಲಾರಿಯನ್ನು ಸ್ವಲ್ಪ ದೂರ ಮುನ್ನಡೆಸಿ ನಿಲ್ಲಿಸಿ, ಬಳಿಕ ವಾಹನದ ಕೀ ಹಾಗೂ ಸಂಬಂಧಿಸಿದ ದಾಖಲೆ ಪತ್ರಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪರಿಶೀಲನೆ ವೇಳೆ ಲಾರಿಯಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸಲಾಗುತ್ತಿರುವುದು ಪತ್ತೆಯಾಗಿದ್ದು, ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಚಾಲಕನ ಪತ್ತೆ ಹಾಗೂ ಅಕ್ರಮ ಕಲ್ಲು ಸಾಗಾಟದ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ