ಪುತ್ತೂರು : ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ನುಗ್ಗಿ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಭೀಕರ ದರೋಡೆ ನಡೆಸಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ಆರೋಪಿ ವಿರುದ್ಧ ಬರೋಬ್ಬರಿ 41 ಬಾರಿ ನ್ಯಾಯಾಲಯದಿಂದ ದಸ್ತಗಿರಿ ವಾರೆಂಟ್ ಹೊರಡಿಸಲಾಗಿದ್ದರೂ ಪೊಲೀಸರಿಗೆ ಸಿಗದೆ ಸತತವಾಗಿ ಚಾಣಾಕ್ಷತನದಿಂದ ತಪ್ಪಿಸಿಕೊಳ್ಳುತ್ತಿದ್ದನು.
ಕೇರಳ ರಾಜ್ಯದ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ. (38) ಬಂಧಿತ ಕುಖ್ಯಾತ ದರೋಡೆಕೋರ. ಈತನನ್ನು ಪೊಲೀಸರು ತ್ರಿಶೂರ್ ಜಿಲ್ಲೆಯ ಮಿಯೂರು ಎಂಬಲ್ಲಿ ಅತ್ಯಂತ ರಹಸ್ಯ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ವಿವರಗಳ ಪ್ರಕಾರ, 2017ರ ಡಿಸೆಂಬರ್ 22ರಂದು ಪುತ್ತೂರು ನಗರದ ಮನೆಯೊಂದಕ್ಕೆ ನುಗ್ಗಿದ್ದ ಮೂರು ಮಂದಿ ಸಶಸ್ತ್ರ ಅಪರಿಚಿತ ದರೋಡೆಕೋರರು, ಮನೆ ಮಂದಿಗೆ ಪಿಸ್ತೂಲ್ ಮತ್ತು ಮಾರಕಾಸ್ತ್ರ ಚೂರಿಯನ್ನು ತೋರಿಸಿ ಕೊಲೆ ಬೆದರಿಕೆ ಹಾಕಿದ್ದರು. ಬಳಿಕ ಮನೆಯಲ್ಲಿದ್ದ ಸುಮಾರು 2,88,000 ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ್ದ ಪೊಲೀಸರು ಆರೋಪಿ ನೆಲ್ಸನ್ ಹಾಗೂ ಆತನ ಗ್ಯಾಂಗ್ ಅನ್ನು ಬಂಧಿಸಿದ್ದರು.
ಬಂಧನದ ಬಳಿಕ ನ್ಯಾಯಾಲಯದಿಂದ ಕಟ್ಟುನಿಟ್ಟಿನ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದ ನೆಲ್ಸನ್, 2021ರ ಆಗಸ್ಟ್ 17ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದಿಢೀರ್ ನಾಪತ್ತೆಯಾಗಿದ್ದನು. ಈತನ ಪತ್ತೆಗಾಗಿ ನ್ಯಾಯಾಲಯವು ಸತತವಾಗಿ ಒಟ್ಟು 41 ಬಾರಿ ದಸ್ತಗಿರಿ ವಾರೆಂಟ್ ಆದೇಶ ಹೊರಡಿಸಿತ್ತಾದರೂ, ಈತ ಕೇರಳದಲ್ಲಿ ಅಡಗಿಕೊಂಡು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದನು. ಪ್ರಸ್ತುತ ಜುಲೈ 8ರಂದು ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಸಂತೋಷ್ ಎ, ಕಾನ್‌ಸ್ಟೆಬಲ್ ವಿನಾಯಕ ಮತ್ತು ಶಿವರಾಜ್ ಅವರನ್ನೊಳಗೊಂಡ ವಿಶೇಷ ತಂಡವು ಮಿಯೂರಿನಲ್ಲಿ ಆರೋಪಿಯನ್ನು ಸುತ್ತುವರಿದು ಬಂಧಿಸಿದೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿ ಕಾನೂನಿಗೆ ದ್ರೋಹ ಬಗೆದಿರುವ




