Home Latest ತೆಂಕಪೇಟೆ: ರಸ್ತೆ ಹೊಂಡ ಮುಚ್ಚಲು ಟ್ರಾಫಿಕ್ ಪೊಲೀಸರ ಶ್ರಮದಾನ…!!

ತೆಂಕಪೇಟೆ: ರಸ್ತೆ ಹೊಂಡ ಮುಚ್ಚಲು ಟ್ರಾಫಿಕ್ ಪೊಲೀಸರ ಶ್ರಮದಾನ…!!

ಉಡುಪಿ: ನಗರದ ತೆಂಕಪೇಟೆ ಪ್ರದೇಶದಲ್ಲಿರುವ ರಸ್ತೆಯ ಹೊಂಡದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯವರು ಸ್ವಯಂಪ್ರೇರಿತರಾಗಿ ಶ್ರಮದಾನ ನಡೆಸಿ ಹೊಂಡವನ್ನು ತಾತ್ಕಾಲಿಕವಾಗಿ ಮುಚ್ಚಿದರು.

ಮಳೆ ಹಾಗೂ ನಿರಂತರ ವಾಹನ ಸಂಚಾರದಿಂದ ರಸ್ತೆ ಹೊಂಡಗಳು ಉಂಟಾಗಿ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ಪೊಲೀಸರು ಅಗತ್ಯ ಸಾಮಗ್ರಿಗಳನ್ನು ಬಳಸಿ ರಸ್ತೆ ಹೊಂಡವನ್ನು ಮುಚ್ಚುವ ಕಾರ್ಯ ಕೈಗೊಂಡರು.ಇತ್ತೀಚೆಗೆ ಉಡುಪಿಗೆ ಆಗಮಿಸಿದ  ಟ್ರಾಫಿಕ್ ಎಸ್ ಐ ಮಹೇಶ್ ಅವರು ಸಮಾಜಮುಖಿ ಕಾರ್ಯವನ್ನು ಕೈಗೊಂಡಿದ್ದಾರೆ.

ಸ್ಥಳೀಯ ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಈ ಸಮಾಜಮುಖಿ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಂಬಂಧಿಸಿದ ಇಲಾಖೆಯು ಶಾಶ್ವತವಾಗಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.