ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಐವರ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರಿದ್ದ ಗೂಡ್ಸ್ ಟೆಂಪೋ ಪಲ್ಟಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಟೆಂಪೋದಲ್ಲಿ 12 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದು, ಈ ಪೈಕಿ ಉತ್ತರ ಪ್ರದೇಶ ಮೂಲದ ಐವರು ಕಾರ್ಮಿಕರು ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ
ಉಳಿದವರೆಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವೆಂಟ್ ಒಂದಕ್ಕೆ ಸಾಮಗ್ರಿಗಳನ್ನು ತುಂಬಿಕೊಂಡಿದ್ದ ಟೆಂಪೋ ಕಾಪುವಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇದರಿಂದ ಟೆಂಪೋ ಒಳಗಿದ್ದವರು ಗಂಭೀರ ಗಾಯಗೊಂಡಿದ್ದಾರೆ ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪೊಲೀಸರು ಘಟನೆ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.



