ಪಡುಬಿದ್ರಿ: ಆಟೋ ರಿಕ್ಷಾ ಮತ್ತು ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ವೇಳೆ ಮಧ್ಯಾಹ್ನ ಸಂಭವಿಸಿದೆ.
ಉಚ್ಚಿಲ ನಿವಾಸಿ ರಫೀಕ್ ಗಾಯಗೊಂಡ ಚಾಲಕ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



