Home Karnataka ಕಾಂಗ್ರೆಸ್ ಮಾಜಿ ಶಾಸಕ RV ದೇವರಾಜ್ ಹೃದಯಾಘಾತದಿಂದ ನಿಧನ…!!

ಕಾಂಗ್ರೆಸ್ ಮಾಜಿ ಶಾಸಕ RV ದೇವರಾಜ್ ಹೃದಯಾಘಾತದಿಂದ ನಿಧನ…!!

ಬೆಂಗಳೂರು : ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ.

ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.