ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್(21) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಬಂಧಿತ ಆರೋಪಿಯಿಂದ 55 ಗ್ರಾಂ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



