ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ರಸ್ತೆಯ ಹಳೇ ಬಸ್ ನಿಲ್ದಾಣ ಮುಂಭಾಗ ಬೈಕ್ ಡಿಕ್ಕಿಯಾಗಿ ವಿಟ್ಲ ಮುಡೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ(68) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಕಬಕ ಕಡೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದೆ.
ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.



