Home Crime ಎಂಬಿಬಿಎಸ್ ವಿದ್ಯಾರ್ಥಿನಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ…!!

ಎಂಬಿಬಿಎಸ್ ವಿದ್ಯಾರ್ಥಿನಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ…!!

ಸುರತ್ಕಲ್ : ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಫ್ಲಾಟ್‌ನಲ್ಲಿ ಪೋಷಕರೊಂದಿಗೆ ವಾಸವಿದ್ದರು. ಮಂಗಳವಾರ ಕಟೀಲು ದೇಗುಲಕ್ಕೆ ತೆರಳಿ ವಾಪಸ್ಸಾದ ಬಳಿಕ ಏಕಾಏಕಿ 3ನೇ ಅಂತಸ್ತಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ ಎನ್ನಲಾಗಿದೆ.

ಘಟನೆಯಿಂದಾಗಿ ತಲೆಗೆ ಗಂಭೀರ ಗಾಯಗಳಾದ ವಿದ್ಯಾರ್ಥಿನಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯ ಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು ಎನ್ನಲಾಗಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.