ಮಂಗಳೂರು : ಎಂಎಸ್ ಇಝಡ್ ನಲ್ಲಿ ಕಾರ್ಯಾಚರಿಸುತ್ತಿರುವ ಸೀಫುಡ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಾಟ್ನಾ ಮೂಲದ ಬೈಜನಾಥ್ ಪ್ರಸಾದ್ (41) ಕುಸಿದುಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಬೈಜನಾಥ್ 1 ವರ್ಷದಿಂದ ಕಾರ್ಖಾನೆಯಲ್ಲಿ ದುಡಿಯುತ್ತಿದ್ದು, ಶನಿವಾರ ಮಧ್ಯಾಹ್ನ ಊಟದ ಸಮಯ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ.
ಇತರ ಕಾರ್ಮಿಕರು ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರ ಮನೆಯವರು ಬಜಪೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.




