ಕುಂದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ದಿನಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ (40) ಅವರು ಬುಧವಾರ ತೀವ್ರ ಹೃದಯಾಘಾತದಿಂದ ನಿಧನರಾದರು.
ನಾಗೇಶ್ ಗಾಣಿಗ ಅವರು ಹಲವು ವರ್ಷಗಳಿಂದ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳು ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ನಿಷ್ಪಕ್ಷಪಾತವಾಗಿ ವರದಿ ಮಾಡುವ ಮೂಲಕ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು. ಕೃಷಿ ಕಾಯಕದ ಜೊತೆಗೆ ಪತ್ರಕರ್ತ ವೃತ್ತಿಯನ್ನೂ ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು.
ಬುಧವಾರ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರಾಗಿ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರು, ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.