Home Crime ಬೆಂಗಳೂರು : ಆರೋಪಿಯ ಕಾರಿನಲ್ಲಿ ಹಣ ಕದ್ದ ಹೆಡ್ ಕಾನ್‌ಸ್ಟೇಬಲ್…!!

ಬೆಂಗಳೂರು : ಆರೋಪಿಯ ಕಾರಿನಲ್ಲಿ ಹಣ ಕದ್ದ ಹೆಡ್ ಕಾನ್‌ಸ್ಟೇಬಲ್…!!

ಬೆಂಗಳೂರು : ನಗರದ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲೇ ಇರುವ ಸಿಸಿಬಿ ವಿಭಾಗದ ಹೆಡ್ ಕಾನ್‌ಸ್ಟೇಬಲ್‌ವೊಬ್ಬ 11 ಲಕ್ಷ ಹಣ ರೂಪಾಯಿ ಕಳ್ಳತನ ಮಾಡಿರುವುದು ತನಿಖೆಯಿಂದ ಬಹಿರಂಗವಾಗಿದೆ.

ಸೈಬರ್ ಪ್ರಕರಣವೊಂದರಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಆತ ಜಾಮೀನಿನ ಮೇಲೆ ಹೊರಬಂದ ನಂತರ, ತನ್ನ ಕಾರಿನಲ್ಲಿ 11 ಲಕ್ಷ ರೂ ಹಣವಿದ್ದ ಬ್ಯಾಗ್ ನಾಪತ್ತೆಯಾಗಿದೆ, ಆ ಹಣವನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು ಎಂದು ತಿಳಿದು ಬಂದಿದೆ

ಜಪ್ತಿ ಮಾಡಿದ್ದ ಕಾರನ್ನು ಆಯುಕ್ತರ ಕಚೇರಿ ಹಿಂದಿನ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಲಾಗಿತ್ತು. ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ 11 ಲಕ್ಷ ರೂ. ಇದ್ದ ಬ್ಯಾಗ್​ ಅನ್ನು ಹೆಡ್ ಕಾನ್‌ಸ್ಟೇಬಲ್ ಜಬೀವುಲ್ಲಾ ತೆಗೆದುಕೊಂಡು ಹೋಗಿರುವುದು ಕಂಡುಬಂದಿದೆ.

ಜಬೀವುಲ್ಲಾನ ಮನೆ ಪರಿಶೀಲನೆ ನಡೆಸಿದಾಗ ಮನೆಯ ಬೆಡ್‌ನ ಕೆಳಗೆ ಹಣವನ್ನು ಜೋಡಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ಪ್ರಕರಣದ ಬಗ್ಗೆ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿದ್ದೇನೆ‌. ವರದಿ ಆಧರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.