ಉಡುಪಿ: ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಮನವಿ ಸಲ್ಲಿಸಿದ್ದಾರೆ. ನಾಗರ ಪಂಚಮಿ ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಕುಟುಂಬಗಳು ಈ ಆಚರಣೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ರಜೆ ಘೋಷಿಸುವುದು ಸೂಕ್ತ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತವು ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ ನಾಗರ ಪಂಚಮಿ ದಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.




