ಮೂಡಬಿಡಿರೆ : ಬೃಹತ್ ಕ್ರೇನ್ ವೊಂದು ಮನೆಯೊಂದರ ಮೇಲೆ ಉರುಳಿ ಬಿದ್ದ ಘಟನೆ ಮೂಡಬಿದ್ರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ನಡೆದಿದೆ. ಘಟನೆಯಲ್ಲಿ ಮನೆ ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಮೂಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಫೆಲಿಕ್ಸ್ ರೊಡ್ರಿಗಸ್ ಎಂಬವರ ಮನೆ ಮೇಲೆ ಉರುಳಿ ಬಿದ್ದಿದೆ. ಘಟನೆ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ.
ಮೂಡಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




