ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಸುಳ್ಯದ ಗುತ್ತಿಗಾರಿನ ಚಿಕ್ಕುಳಿಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ(19) ಮೃತಪಟ್ಟ ಯುವತಿ.
ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.



