ಸುಬ್ರಹ್ಮಣ್ಯ : ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ದೂರುದಾರರ ಅಪ್ರಾಪ್ತ ವಯಸ್ಕ ಪುತ್ರಿ ಏನೆಕಲ್ಲಿನಲ್ಲಿರುವ ಸ್ನೇಹಿತೆಯ ಮನೆಗೆ ತೆರಳಿದ್ದ ವೇಳೆ ಜು. 8ರಂದು ಮನೆ ಸಮೀಪಕ್ಕೆ ಕರೆದುಕೊಂಡು ಹೋಗಿ ಆರೋಪಿ ಮೋಕ್ಷಿತ್ ಎಂಬಾತ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ವಿಷಯವನ್ನು ಬಹಿರಂಗಪಡಿಸಿದರೆ ಜೀವ ಬೆದರಿಕೆ ಹಾಕಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ.




