Home Karavali Karnataka ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿಗೆಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ…!!

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿಗೆಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ…!!

ಉಡುಪಿ : ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿ ಇರವಿನ ಅರಿವಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ 2023 ದೊರಕಿದೆ. ಶುಕ್ರವಾರದಂದು ತುಮಕೂರಿನ ಗುಬ್ಬಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ, ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಮತ್ತಿತರರು ಉಪಸ್ಥಿತರಿದ್ದರು