ಬ್ರಹ್ಮಾವರ, ಜು. 17: ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ನಿವಾಸಿ ಹರೀಶ್ (49) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರ ಪುತ್ರ ಕೀರ್ತನ್ ಕೆ. ಅವರು ನೀಡಿದ ಮಾಹಿತಿಯಂತೆ, ಹರೀಶ್ ಅವರು ಕೆಲಕಾಲದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಅಥವಾ ಇತರ ಕಾರಣಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡು, ಜುಲೈ 14ರಂದು ಬೆಳಿಗ್ಗೆ 8.15ರಿಂದ ಮಧ್ಯಾಹ್ನ 1 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಹಾಲ್‌ನಲ್ಲಿದ್ದ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 49/2026ರಡಿ ಬಿಎನ್‌ಎಸ್‌ಎಸ್ (BNSS) ಕಲಂ 194ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.




