Home Crime ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ…!!

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ…!!

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಾ‌ ಬೆಟ್ಟು, ಉಪ್ಪಿನಕುದ್ರು ಗ್ರಾಮದ ನಿವಾಸಿ ಸುಹಾಸ್ (23) ಜುಲೈ 13ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಬಳಿಕ ಅವರು ಮನೆಗೆ ಮರಳಿಲ್ಲ ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೊದಲು ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ತಡವಾಗಿ ದೂರು ದಾಖಲಿಸಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

5 ಅಡಿ 9 ಇಂಚು ಎತ್ತರವಿದ್ದು,ನೇರಳೆ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಯುವಕನ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.