ಶ್ರೀನಗರ : ಜಮ್ಮುಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಸರಕಾರಿ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.
ಅದರಲ್ಲಿ ಇಬ್ಬರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪಾ ಅವರ ನಿವಾಸದ ಮೇಲೆ
ಪಾಕಿಸ್ತಾನದ ಫಿರಂಗಿ ಶೆಲ್ ಬಡಿದಿದೆ.
ಈ ವೇಳೆ ರಾಜ್ ಕುಮಾರ್ ಥಾಪಾ ಮತ್ತು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು.
ಆದರೆ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.