Home Crime ಮೂಡಬಿದಿರೆ: ಮಹಿಳೆ ಆತ್ಮಹತ್ಯೆಗೆ ಶರಣು…!!

ಮೂಡಬಿದಿರೆ: ಮಹಿಳೆ ಆತ್ಮಹತ್ಯೆಗೆ ಶರಣು…!!

ಮೂಡುಬಿದಿರೆ: ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಸಂಭವಿಸಿದೆ.

ಮೃತ ಮಹಿಳೆ ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ತಿಳಿದು ಬಂದಿದೆ.

ಈ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.