ಮಂಗಳೂರು : ಬಿಸಿ ರೋಡ್‌ನಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರು (ಮಂಗಳಮುಖಿಯರು) ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಲಿಂಗತ್ವ ಅಲ್ಪಸಂಖ್ಯಾತರು, ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಮಾಯಕರ ಮೇಲಿನ ದೌರ್ಜನ್ಯವನ್ನು ಖಂಡಿಸಿದರು. ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಗೆ ಯಾವುದೇ ಜಾತಿ, ಧರ್ಮದ ಆಧಾರದ ಮೇಲೆ ಪರಿಗಣನೆ ಮಾಡದೆ, ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಲಾವಣ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಬೇಕು ಹಾಗೂ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಆಗ್ರಹಿಸಿದ ಅವರು, ಸಮಾಜದಲ್ಲಿ ಮಹಿಳೆಯರು ಮತ್ತು ದುರ್ಬಲ ವರ್ಗಗಳ ಸುರಕ್ಷತೆಗೆ ಸರ್ಕಾರ ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಂಗಳಮುಖಿಯರು ಪೋಸ್ಟರ್ ಹಿಡಿದು ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿದರು.





