Home Crime ಕೆನಡಾದಲ್ಲಿ ಕನ್ನಡಿಗನ ಬರ್ಬರ ಕೊಲೆ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲದ ಯುವಕ…!!

ಕೆನಡಾದಲ್ಲಿ ಕನ್ನಡಿಗನ ಬರ್ಬರ ಕೊಲೆ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲದ ಯುವಕ…!!

ಬೆಂಗಳೂರು : ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.

6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್‌ ಎಲ್‌ಎನ್‌ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪೋಷಕರಿಗೆ ನಿನ್ನೆ ಟೊರೊಂಟೋ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ಚಂದನ್ ಕೆನಡಾದ ವುಡ್ಬೈನ್ ಮಾಲ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ದುಷ್ಕರ್ಮಿಗಳು ಗುಂಡಿನ ಸುರಿಮಳೆ ಸುರಿಸಿದ್ದಾರೆ.

ಇದರಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಭಾರತದ ಮಣ್ಣಲ್ಲೇ ಆತನ ಮೃತದೇಹ ಅಂತ್ಯಸಂಸ್ಕಾರ ಮಾಡುವ ಆಸೆ ಇದೆ. ಕೆನಡಾದಿಂದ ಭಾರತಕ್ಕೆ ಮೃತದೇಹವನ್ನು ಹೇಗೆ ತರುವುದು ಎಂಬ ಚಿಂತೆ ಪೋಷಕರದ್ದು.