Home Karnataka News ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಮೃತ್ಯು…!!

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಮೃತ್ಯು…!!

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ.

ಶ್ರೀಕಾಂತ್ ಅವರು ಸ್ನೇಹಿತರೊಂದಿಗೆ ಶುಕ್ರವಾರ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿ, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ.

ಶನಿವಾರ ಮುಂಜಾನೆ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ಹೇಳಲಾಗಿದೆ.

ಆದರೆ ರಾತ್ರಿ ವೇಳೆ ಅವರಿಗೆ ತೀವ್ರ ಅಸ್ವಸ್ಥತೆ ಉಂಟಾಗಿ ತಂಗಿದ್ದ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.