ಮೂಡುಬಿದಿರೆ: ಮೂಡಬಿದಿರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಕೈಯಲ್ಲಿ ಕತ್ತಿ ಹಿಡಿದು ಭಯದ ವಾತಾವರಣ ಸೃಷ್ಟಿಸಿದ ಘಟನೆ ಸಂಭವಿಸಿದೆ.
ಯುವಕನನ್ನು ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ನಿವಾಸಿ ಎಂದು ಗುರುತಿಸಲಾಗಿದೆ.
ಖಾಸಗಿ ಬಸ್ ನಿಲ್ದಾಣದಲ್ಲಿ ಕೈಯಲ್ಲಿ ಕತ್ತಿಯನ್ನು ಹಿಡಿದುಕೊಂಡು ಮೊಬೈಲ್ ಅಂಗಡಿಗೆ ತೆರಳಿದ ಯುವಕ ಅಲ್ಲಿದ್ದ ಯುವಕರಿಗೆ ಮೊಬೈಲ್ ಕೊಡುವಂತೆ ಬೆದರಿಸಿದ್ದಾನೆ ಎಂದು ತಿಳಿದು ಬಂದಿದೆ.
ಆ ಬಳಿಕ ಹೊರಗಡೆ ಬಂದು ತಲವಾರನ್ನು ಬೆನ್ನಿನ ಭಾಗದಲ್ಲಿ ಇರಿಸಿಕೊಂಡು ಕುಳಿತುಕೊಂಡಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಧಾವಿಸಿ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.







