Home Latest ವಿದ್ಯೋದಯ ಪಿಯು ಕಾಲೇಜಿನಲ್ಲಿ “ವ್ಯಸನ ಮುಕ್ತ ಉಡುಪಿ” ಜಾಗೃತಿ ಕಾರ್ಯಕ್ರಮ…!!

ವಿದ್ಯೋದಯ ಪಿಯು ಕಾಲೇಜಿನಲ್ಲಿ “ವ್ಯಸನ ಮುಕ್ತ ಉಡುಪಿ” ಜಾಗೃತಿ ಕಾರ್ಯಕ್ರಮ…!!

ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ವಿದ್ಯೋದಯ ಪಿಯು ಕಾಲೇಜಿನಲ್ಲಿ “ವ್ಯಸನ ಮುಕ್ತ ಉಡುಪಿ” ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ತಾರಾನಾಥ್ ಹಾಗೂ ರುಕ್ಮಯ್ಯ ಅವರು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸೇವನೆಯಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳು, ಅದರ ಅಪಾಯಗಳ ಕುರಿತು ಮಾಹಿತಿ ನೀಡಿದರು.

ಸರ್ಕಾರ ಹಾಗೂ ಪೊಲೀಸ್ ಇಲಾಖೆ ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕೇವಲ ಕಾನೂನು ಜಾರಿಯಿಂದ ಮಾತ್ರ ಈ ಸಮಸ್ಯೆಯನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬ ನಾಗರಿಕರ ಜಾಗೃತಿ ಮತ್ತು ಜವಾಬ್ದಾರಿಯೂ ಅಷ್ಟೇ ಮುಖ್ಯ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಪಾಲನೆ, ರಸ್ತೆ ಸುರಕ್ಷತೆ ಹಾಗೂ ಹೊಣೆಗಾರಿಕೆಯುತ ನಾಗರಿಕರಾಗುವ ಕುರಿತು ಅಗತ್ಯ ಮಾಹಿತಿಯನ್ನು ನೀಡಲಾಯಿತು.