Home Crime ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮುದಾಯ ಆರೋಗ್ಯಾಧಿಕಾರಿ ಚಿಕಿತ್ಸೆ ಫಲಿಸದೆ ಸಾವು…!!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮುದಾಯ ಆರೋಗ್ಯಾಧಿಕಾರಿ ಚಿಕಿತ್ಸೆ ಫಲಿಸದೆ ಸಾವು…!!

ಪುತ್ತೂರು : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿ ಪ್ರಜ್ಞಾ (26) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಿತ್ತಡ್ಕ ನಿವಾಸಿಯಾಗಿದ್ದ ಪ್ರಜ್ಞಾ ಅವರು ಬಡಗನ್ನೂರಿನಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜುಲೈ 21ರಂದು ತಮ್ಮ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.