ಉಡುಪಿ: ಬಂಟಕಲ್ ಸಮೀಪ ಮಹೀಂದ್ರಾ ಥಾರ್ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ವೇಗವಾಗಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.




