ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್” ”ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದ್ಯಾರ್ಥಿನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.