Home Crime ವಸತಿ ಶಾಲೆ ಪ್ರವೇಶಾತಿಗಾಗಿ ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ…!!

ವಸತಿ ಶಾಲೆ ಪ್ರವೇಶಾತಿಗಾಗಿ ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ…!!

ಶಿವಮೊಗ್ಗ : ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಗೆ ಡ್ರಮ್‌ ಸೆಟ್ ಬೇಕು ಎಂಬ ನೆಪದಲ್ಲಿ ಪ್ರಿನ್ಸಿಪಾಲ್ ಲಂಚ ಕೇಳಿದ್ದು, ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇಂದು ಬೆಳಗ್ಗೆ 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್‌ಪೆಕ್ಟರ್‌ ರುದ್ರೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.