Home Crime ಕಡೆಪಾಲದಲ್ಲಿ ವಿವಾಹಿತ ಯುವತಿ ಅನುಮಾನಸ್ಪದ ಸಾವು : ಮೂವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಕಡೆಪಾಲದಲ್ಲಿ ವಿವಾಹಿತ ಯುವತಿ ಅನುಮಾನಸ್ಪದ ಸಾವು : ಮೂವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!!

ಸಂಪಾಜೆ : ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಜುಬೈದಾ (43) ಅವರ ಪುತ್ರಿ ಫಾತಿಮತ್ ನಿಶಾನ (22) ಅವರನ್ನು ನಾಲ್ಕು ವರ್ಷಗಳ ಹಿಂದೆ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ವಾಸವಿರುವ ಅನ್ಸಾರ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು.

ಜು.18ರಂದು ರಾತ್ರಿ ಫಾತಿಮತ್ ನಿಶಾನ ಅವರು ತಾಯಿಗೆ ಕರೆ ಮಾಡಿ, ತನ್ನ ಮಾವ, ಅತ್ತೆ, ಹಾಗೂ ನಾದಿನಿ ಅವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಪ್ರಕಾರ, ತಾಯಿ ಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಫೋನ್ ಅನ್ನು ಕಸಿದುಕೊಂಡ ಮಾವ ಅಲವಿ ಅವರು, “ನಿನ್ನ ಮಗಳನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.

ಈ ಮಾಹಿತಿ ತಿಳಿದ ಬಳಿಕ ಪಿರ್ಯಾದಿದಾರರು ಮಗಳ ಮನೆಗೆ ತೆರಳಿದಾಗ, ಫಾತಿಮತ್ ನಿಶಾನ ಮೃತಪಟ್ಟಿರುವುದು ಕಂಡುಬಂದಿದೆ. ಕೌಟುಂಬಿಕ ಮನಸ್ತಾಪದ ಹಿನ್ನೆಲೆಯಲ್ಲಿ ತನ್ನ ಮಗಳನ್ನು ಆರೋಪಿಗಳಾದ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಕೊಲೆ ಮಾಡಿರುವುದಾಗಿ ಜುಬೈದಾ ಅವರು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.